Breaking News

ಪ್ರಜ್ವಲ್ ಬಳಿ ಇತ್ತು 15 ಸಿಮ್ ಕಾರ್ಡ್ʼಗಳು.! ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್

Spread the love

ಬೆಂಗಳೂರು: ಜೈಲಿನಲ್ಲಿರುವ ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಒಂದೊಂದೇ ಕೃತ್ಯಗಳು ಬಯಲಿಗೆ ಬರುತ್ತಿವೆ. ಪ್ರಜ್ವಲ್ ರೇವಣ್ಣ ಬಳಿ ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಿಮ್‍ ಗಳು ಇತ್ತಂತೆ. ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್.

ಹೀಗೆ ಪ್ರಜ್ವಲ್ ರೇವಣ್ಣ ಬರೋಬ್ಬರಿ 15 ಸಿಮ್ ಕಾರ್ಡ್ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲ ಪರಿಚಿತರ ಪತ್ನಿಯರೇ ಪ್ರಜ್ವಲ್‍ಗೆ ಟಾರ್ಗೆಟ್. ಕೆಲಸ ಕೇಳಿಕೊಂಡು, ಮಕ್ಕಳಿಗೆ ಸೀಟ್ ಕೇಳಿಕೊಂಡು ಬಂದವರ ಮೇಲೂ ಕಣ್ಣು ಹಾಕಿದ್ದ. ಅವರ ಬಳಿ ಫೋನ್ ನಂಬರ್ ಪಡೆದು ಪದೇ ಪದೇ ಕಾಲ್ ಮಾಡುತ್ತಿದ್ದ. ಕ್ರಮೇಣ ಅವರೊಂದಿಗೆ ಸಲುಗೆ ಬೆಳೆಸಿ ಕರೆ ಮಾಡುತ್ತಿದ್ದ. ನಂತರ ವೀಡಿಯೋ ಕಾಲ್ ಮಾಡಿ ಬೆತ್ತಲಾಗುವಂತೆ ಬೆದರಿಕೆ ಹಾಕುತ್ತಿದ್ದ.

Prajwal Revanna: ಪ್ರಜ್ವಲ್ ಬಳಿ ಇತ್ತು 15 ಸಿಮ್ ಕಾರ್ಡ್ʼಗಳು.! ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್

ಇಷ್ಟು ಮಾತ್ರವಲ್ಲದೇ ನನ್ನೊಂದಿಗೆ ಸಹಕರಿಸದಿದ್ದರೆ ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದ. ಬೆದರಿಕೆಗೆ ಹೆದರಿ ನಗ್ನರಾಗಿರುವುದಾಗಿ ಇತ್ತೀಚಿಗೆ ಸಂತ್ರಸ್ತೆಯೊಬ್ಬರು ಕೊಟ್ಟ ದೂರಿನಲ್ಲಿ ಪ್ರಜ್ವಲ್ ಕರಾಳಮುಖ ಬಯಲು ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ