Breaking News

ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ, ಹಲವರಿಗೆ ಶುರುವಾಯ್ತು ನಡುಕ!

Spread the love

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬರೆದಿದ್ದ ಪತ್ರಕ್ಕೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಂದಿಸಿ ಉತ್ತರ ಬರೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಸೇರಿದಂತೆ ಈ ಹಿಂದೆ ಕರ್ನಾಟಕದಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿ ಪತ್ರ ಬರೆದಿದ್ದರು, ಇದೀಗ ಗೃಹ ಸಚಿವರ ಕಡೆಯಿಂದ ಸ್ಪಂದನೆ ಸಿಕ್ಕಿದ್ದು, ಹಲವರಿಗೆ ನಡುಕ ಶುರುವಾಗಿದೆ.

ವಿಜಯಪು, (ಜೂನ್ 28): ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಪತ್ರಕ್ಕೆ ಕೇಂದ್ರ ಗೃಹ ಸಚಿವ ಸ್ಪಂದನೆ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಗ್ಗೆ ನಿಮ್ಮ ಪತ್ರ ಸ್ವೀಕಾರ ಮಾಡಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸನಗೌಡ ಪಾಟೀಲ್ ಯತ್ನಾಳ್​ಗೆ ವಾಪಸ್ ಪತ್ರ ಬರೆದಿದ್ದಾರೆ.ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ, ಹಲವರಿಗೆ ಶುರುವಾಯ್ತು ನಡುಕ!

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ, 2016ರಲ್ಲಿ ಮಡಿಕೇರಿಯಲ್ಲಿ ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣ, 2019ರಲ್ಲಿ ಡಾ.ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆ ಪ್ರಕರಣ, ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಯತ್ನಾಳ್ ಅಮಿತ್ ಶಾಗೆ ಪತ್ರ ಬರೆದಿದ್ದರು. ಇದೀಗ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಉತ್ತರ ಬರೆದಿದ್ದು, ಪ್ರಕರಣಗಳಲ್ಲಿ ಹೆಸರು ಕೇಳಿಬಂದವರಿಗೆ ನಡುಕು ಶುರುವಾದಂತಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ