Breaking News

ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

Spread the love

ಹಾರೂಗೇರಿ : ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ವಿರುದ್ಧ ಸ್ವ ಪಕ್ಷದರೇ ಕೆಲಸ ಮಾಡಿದ್ದರು, ನಾನು ಮಾಜಿ ಶಾಸಕ ಶಾಮ್ ಘಾಟಗೆ ಮಾತು ಕೇಳುತ್ತೇನೆ ಎಂದು ಆರೋಪ ಮಾಡುತ್ತಾರೆ ಘಾಟಗೆ ಅಷ್ಟೇ ಅಲ್ಲ ಮನೆಯಲ್ಲಿ ನಾನು ನನ್ನ ಹೆಂಡತಿ, ಮಕ್ಕಳ ಮಾತೂ ಕೇಳಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದರು.ಹೆಂಡ್ತಿ, ಮಕ್ಕಳ ಮಾತೇ ಕೇಳಲ್ಲ ; ಕುಡಚಿ ಶಾಸಕರ ವಿರುದ್ಧ ಸಚಿವ ಸತೀಶ್ ವಾಗ್ದಾಳಿ

ಹಾರೂಗೇರಿ ಪಟ್ಟಣದಲ್ಲಿ ನೂತನ ಸಂಸದರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಇವರು. 23 ಸಾವಿರ ಲೀಡ್ ಕೊಟ್ಟಿದ್ದೇನೆ ಎಂದಿದ್ದ ಮಹೇಂದ್ರ ತಮ್ಮಣ್ಣವರರಿಗೆ ಕುಡಚಿ ಒಂದೇ ಊರಲ್ಲಿ 18 ಸಾವಿರ ಮತಗಳು ಬಂದಿವೆ.

ಇನ್ನು ನಾಲ್ಕು ಸಾವಿರ ಮತಗಳು ಮಾತ್ರ ಉಳಿದವು. ಕಳೆದ ಬಾರಿ ನಿಮಗೆ ಬಿದ್ದ ಮತಗಳು ಕೂಡ ಬಿಜೆಪಿಗೆ ಹೋಗಿವೆ ಎಂದರು.ಈ ಕುರಿತು ಸುಮ್ಮನೆ ಆರೋಪ ಮಾಡಲು ನಾನು ಖಾಲಿ ಇಲ್ಲ. ಯಾರು ಕೆಲಸ ಮಾಡಿಲ್ಲ ಅವರ ವಿರುದ್ಧ ಆರೋಪ ಮಾಡಿದ್ದೇನೆ.

ಎಲ್ಲಾ ಕಡೆ ಮೋಸ ಆಗಿದ್ದರೆ ನಾವು ಗೆಲ್ಲುವುದು ಕಠಿಣ ಆಗುತ್ತಿತ್ತು. ರಾಜಕೀಯದಲ್ಲಿ ಹೊಂದಾಣಿಕೆ ಇರಬೇಕು, ತಪ್ಪಾಯ್ತು ಎಂದು ಒಪ್ಪಿಕೊಂಡು ಸರಿಪಡಿಸಿಕೊಳ್ಳುವುದು ಒಳ್ಳೇದು ಎಂದರು


Spread the love

About Laxminews 24x7

Check Also

ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರದೀಪನ ಪೂಜೆ ಮೂಲಕ ಚಾಲನೆ”

Spread the loveಗೋಕಾಕ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಇದರ 2025-26 ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ