ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Spread the love

ಬೈಲಹೊಂಗಲ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಸಮೀಪ ಸೋಮವಾರ ನಡೆದಿದೆ.

ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ.

ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನುಜ್ಜುಗುಜ್ಜಾಗಿವೆ.

ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಲಕ್ಷ್ಮೀ ಹೆಬ್ಬಾಳಕರ್‌

Spread the love ಬೆಂಗಳೂರು, ಜುಲೈ 19: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ