Breaking News

ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ.: ಸತೀಶ್ ಜಾರಕಿಹೊಳಿ

Spread the love

ರಾಯಚೂರು : ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಅಭ್ಯರ್ಥಿಯ ಮೇಲೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿಗೆ ಚಾಟಿ ಬೀಸಿದ್ದಾರೆ.

ಮಸ್ಕಿ ನಗರದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮಸ್ಕಿ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ  ಸಂಘಟನೆ, ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುವುದರ ಬಗ್ಗೆ ಸಿದ್ದತೆ ನಡದಿದೆ. ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಈಶ್ವರ ಖಂಡ್ರೆ ಮಸ್ಕಿ ಕ್ಷೇತ್ರಕ್ಕೆ ಒಂದು ಬಾರಿ ಭೇಟಿ ನೀಡಿದ್ದಾರೆ. ನಾವು ಸಹ ಮೂರನೇ ಬಾರಿ ಆಗಮಿಸಿದ್ದೇವೆ ಎಂದರು.

ಪಕ್ಷದ ಕಾರ್ಯಕರ್ತರಿಗೆ ಸ್ಥಾನ ಮಾನ ನೀಡುವ ಬಗ್ಗೆ ಮಾತನಾಡಿ, ಕಾಂಗ್ರೆಸ್  ಪಕ್ಷ ದೊಡ್ಡದಿದೆ. ಅದರಲ್ಲಿ ನಿರಂತರ ಪಕ್ಷ  ಸಂಘಟನೆಗೆ ಕೆಲಸ ಮಾಡಿದವರಿಗೆ ಸೂಕ್ತ ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಲಿಂಗಸುಗೂರು ಶಾಸಕ ಡಿ.ಎಸ್ .ಹೂಲಗೇರಿ, ರುದ್ರಗೌಡ ತುರಡಗಿ, ಆದೇಶ ನಾಯಕ, ಆದಪ್ಪ ಬ್ಯಾಲಿಹಾಳ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.

 

 ಉತ್ತರ ಕರ್ನಾಟಕದ ಮಸ್ಕಿ ಹಾಗೂ ಬಸವಕಲ್ಯಾಣಗಳ ಎರಡು ಕ್ಷೇತ್ರದ ವಿಧಾನಸಭೆಯ ಉಪಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದರೆ ಮೂರು ಪಕ್ಷಗಳ ಚಂದುರಂಗದಾಟ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಕುರಿತು ಪಕ್ಷದ ಹಲವು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲು ಹಾಗೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡು ಅಭ್ಯರ್ಥಿಗಳ ಗೆಲುವಿಗಾಗಿ ಹೆಲಿಕಾಪ್ಟರ್ ಮೂಲಕ ಕಲ್ಯಾಣ ಕರ್ನಾಟಕ ಪ್ರವಾಸ ಕೈ ಗೊಂಡಿದ್ದಾರೆ.

ಹೆಲಿಕಾಪ್ಟರ್ ಮೂಲಕ ಪ್ರವಾಸ ಕೈ ಗೊಂಡಿರುವ ಅವರು, ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಅಗತ್ಯ ಕಾರ್ಯತಂತ್ರವನ್ನು ರೂಪಿಸಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವುಕುಮಾರ್‍ರವರು ಈಗಾಗಲೇ ಕಲ್ಯಾಣ ಕರ್ನಾಟಕ ಪ್ರವಾಸ ಕೈ ಗೊಂಡಿದ್ದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಗೆಲುವಿಗಾಗಿ ಕಸರತ್ತು ಆರಂಭಿಸಿದೆ.
ಈ ಹಿಂದೆಯು ರಾಜ್ಯಾದ್ಯಂತ ನಡೆದಿದ್ದ ಹಲವು ಚುನಾವಣೆ ಪ್ರಚಾರ ಹಾಗೂ ಸಮಾವೇಶಗಳಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿಯವರು ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರವನ್ನು ರೂಪಿಸುವ ಮೂಲಕ ಪಕ್ಷವನ್ನು ಬಲಪಡಿಸಿದ್ದರು.
ಪ್ರವಾಸದಲ್ಲಿ ಅವರ ಜೊತೆ ವಿವೇಕ್ ಜತ್ತಿ, ಪ್ರಕಾಶ್ ಡಾಂಗೆ, ಜಿಲ್ಲಾ ಎಸ್ಟಿ ಸೆಲ್ ಅಧ್ಯಕ್ಷ ಪ್ರಾಶಾಂತ್ ಗುಡ್ಡಕಾರ್ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ