Breaking News
Home / ರಾಜಕೀಯ / CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಡಿಕೆಶಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಡಿಕೆಶಿ

Spread the love

ಬೆಂಗಳೂರು: ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬರುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಬಣ ಬೇಗುದಿಗೆ ತಡೆ ಹಾಕಲು ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಸಿಎಂ-ಡಿಸಿಎಂ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡುವವರಿಗೆ ಶೋಕಾಸ್‌ ನೋಟಿಸ್‌ ಜಾರಿಗೊ ಳಿಸಲು ನಿರ್ಧರಿಸಿದ್ದಾರೆ.

 

ವಿವಾದದ ಹಿನ್ನೆಲೆಯಲ್ಲಿ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಾಯಿಗೆ ಬಂದಂತೆ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಲೋಕಸಭಾ ಚುನಾವಣೆಯ ಅನಂತರ ಪಕ್ಷದಲ್ಲಿ ಬಣ ರಾಜಕಾರಣ ತೀವ್ರಗೊಂಡಿದ್ದು, ಎರಡೂ ಬಣಗಳ ಮುಖಂಡರು ತಮ್ಮ ಎದುರಾಳಿಗಳ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಇದು ಪಕ್ಷಕ್ಕೆ ಮುಜುಗರ ಉಂಟುಮಾಡುವ ಹಂತಕ್ಕೆ ತಲುಪಿದೆ. ಈ ಬೆಳವಣಿಗೆಗಳು ಹೈಕಮಾಂಡ್‌ ಗಮನವನ್ನೂ ಸೆಳೆಯುತ್ತಿವೆ. ಹೀಗಾಗಿ ಹೇಳಿಕೆ ನೀಡುವವರಿಗೆ ಮೂಗುದಾರ ಹಾಕಲು ತೀರ್ಮಾನಿಸಲಾಗಿದೆ. ಅದರ ಭಾಗವಾಗಿ ಹೇಳಿಕೆ ನೀಡಿದವರೆಲ್ಲರಿಗೂ ನೋಟಿಸ್‌ ಜಾರಿಯಾಗಲಿದೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಡಿ.ಕೆ. ಶಿವಕುಮಾರ್‌, ಪಕ್ಷದ ಆಂತರಿಕ ವಲಯದಲ್ಲಿ ಆಗಬೇಕಾದ ಚರ್ಚೆಗಳ ಬಗ್ಗೆ ಬಹಿ ರಂಗ ಹೇಳಿಕೆ ನೀಡಿದವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಿದ್ದೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ

Spread the loveಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ