Breaking News

ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Spread the love

ಹುಬ್ಬಳ್ಳಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ ಒಟ್ಟು 470 ಕಿ.ಮೀ. ರಸ್ತೆ ಅಭಿವೃದ್ಧಿಗಾಗಿ 8,006 ಕೋಟಿ ರೂ., ಹೊಸದಾಗಿ 459 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು 15 ಕೋಟಿ ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹೆದ್ದಾರಿ ಕಾಮಗಾರಿ ಯೋಜನೆ
ಅನುಮೋದನೆಗೆ ಸಂಸದ ಮನವಿ
ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಸೋಮವಾರ ಭೇಟಿ ಮಾಡಿ ರಾಜ್ಯದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಅನುಮೋದನೆ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದ ವರೆಗೆ ಚತುಷ್ಪಥ ಸುರಂಗ ಮಾರ್ಗ ನಿರ್ಮಾಣ, ಕುಂದಾಪುರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ. ಉದ್ದದ ರಸ್ತೆ ಹಾಗೂ ಸೇತುವೆ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳಿವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ. ಉದ್ದದ ರಸ್ತೆ ಹಾಗೂ ಸೇತುವೆಗಳ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನ ವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ನಿರ್ಮಾಣ ಮಾಡಲು ಅನುಮೋದನೆ ಕೋರಿ ಮನವಿ ಸಲ್ಲಿಸಿದರು.

ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಕಾಮಗಾರಿಗಳ ಡಿಪಿಆರ್‌ ತಯಾರಿಸಲು ಸಮಾಲೋಚಕರನ್ನು ತತ್‌ಕ್ಷಣ ನಿಯೋಜಿಸು ವಂತೆ ಅ ಧಿಕಾರಿಗಳಿಗೆ ಸೂಚಿಸಿದರು.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ