Breaking News

ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ: ಕರವೇಯಿಂದ ಧರಣಿ

Spread the love

ಬೆಳಗಾವಿ: ‘ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು

ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ಆರಂಭಿಸಿದ್ದಾರೆ.

 

ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಆದ್ಯತೆ ಸಿಗಬೇಕು. ರಾಜ್ಯ ಸರ್ಕಾರ ರೂಪಿಸಿದ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ವಿಚಾರವಾಗಿ ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿದ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಸರ್ಕಾರದಿಂದ ಭೂಮಿ ಒದಗಿಸಿದ್ದರೆ ಹಿಂಪಡೆಯಬೇಕು. 15 ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸಿ, ಅವರಿಗೆ ಕನ್ನಡ ಬರವಣಿಗೆ ಪರೀಕ್ಷೆ ಆಯೋಜಿಸಬೇಕು’ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ