Breaking News

ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ:

Spread the love

ಬೆಂಗಳೂರು, ಜುಲೈ 02: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

 

ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ.

50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು. ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ