Breaking News

ಮಸ್ಕಿ ಯಲ್ಲಿ ಬೃಹುತ ಕಾಂಗ್ರೆಸ್ ಸಮಾವೇಶ ಎಲ್ಲ ಹಿರಿಯ ನಾಯಕರು ಭಾಗಿ

Spread the love

ಮಸ್ಕಿ: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23ರಂದು ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಸುಮಾರು 7 ಸಾವಿರ ಆಸನಗಳನ್ನು ಹಾಕಲಾಗುತ್ತಿದ್ದು, ಪೆÇಲೀಸ್ ಠಾಣೆ ಪಕ್ಕದ ಜಾಗದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದೆ. ಸುಮಾರು ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕರ್ತರಿಗೆ ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿವಿಧೆಡೆ ಪಾಕಿರ್ಂಗ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಮಾಹಿತಿ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಮುಖಂಡರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸುತ್ತಿರುವ ಮುಖಂಡರ ಬ್ಯಾನರ್, ಕಟೌಟ್ ರಾರಾಜಿಸುತ್ತಿವೆ. ದಾರಿಯುದ್ದಕ್ಕೂ ಕಾಂಗ್ರೆಸ್ ಚಿನ್ಹೆಯ ಬಂಟಿಂಗ್ಸ್ ಕಟ್ಟಲಾಗಿದೆ.

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ