ಧಾರವಾಡ, ಜುಲೈ 02: ಹೊಸ ಕೇಂದ್ರ ಸರ್ಕಾರ ರಚನೆ ಆದ ಬಳಿಕ ಮೊದಲ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂಗಳ ಕುರಿತು ದೇವರ ಫೋಟೋ ಹಿಡಿದು ಮಾತನಾಡಿದರು. ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ಕೇಳಿ ಬಂದಿದೆ.
ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಹೇಳಿಕೆಯನ್ನು ನಾನು ವಿರೋಧಿಸುತ್ತೇನೆ.
ರಾಹುಲ್ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇಂಥ ಹೇಳಿಕೆ ಮೂಲಕ ಕೋಟ್ಯಾಂತರ ಹಿಂದೂಗಳಿಗೆ ಅವಮಾನ ಮಾಡಿದ್ದೀರಿ. ಸಂಸತ್ ನಲ್ಲಿ ರಾಹುಲ್ ಗಾಂಧಿ ಹಿಂದೂ ಬಗ್ಗೆ ಹೇಳಿಕೆ ವಿಚಾರ ಸರಿಯಲ್ಲ ಎಂದು ರಾಹುಲ್ ಗಾಂಧಿ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.