ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ಅದರ ಉಪನದಿಗಳಾದ ದೂಧಗಂಗಾ, ವೇದಗಂಗಾ ನದಿಗಳಲ್ಲಿ ನೀರಿನ ಹರಿವು ಮಂಗಳವಾರ ಮತ್ತೇ 2 ಅಡಿಯಷ್ಟು ಹೆಚ್ಚಳವಾಗಿದೆ.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿದ ರಾಜಾಪೂರೆ ಬ್ಯಾರೇಜ್ ನಲ್ಲಿ 16,125 ಕ್ಯುಸೆಕ್ ಹೊರ ಹರಿವು ಇದ್ದು, ದೂಧಗಂಗಾ ನದಿಯಿಂದ 4,920 ಕ್ಯುಸೆಕ್ ಸೇರಿದಂತೆ ಕೃಷ್ಣಾ ಹಾಗೂ ದೂಧಗಂಗಾ ನದಿಗಳ ಸಂಗಮ ಸ್ಥಳ ಕಲ್ಲೋಳ ಬ್ಯಾರೇಜ್ ಬಳಿಯಲ್ಲಿ 2,1045 ಕ್ಯುಸೆಕ್ ನೀರು ಹರಿಯುತ್ತಿದೆ.