ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳ 28 ಸದಸ್ಯ ಸ್ಥಾನಗಳಿಗೆ ಮಂಗಳವಾರ ಅವಿರೋಧ ಆಯ್ಕೆ ನಡೆಯಿತು.
ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಯ ತಲಾ ಏಳು ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು.

ಮೂರು ಸಮಿತಿಗಳಿಗೆ ತಲಾ ಏಳು ಉಮೇದುವಾರಿಕೆ ಸಲ್ಲಿಕೆಯಾಗಿದ್ದವು. ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗಷ್ಟೇ ಎಂಟು ನಾಮಪತ್ರ ಸಲ್ಲಿಕೆಯಾಗಿದ್ದವು. ಈ ಪೈಕಿ ಒಬ್ಬರು ಹಿಂದಕ್ಕೆ ಪಡೆದಿದ್ದರಿಂದ ನಾಲ್ಕೂ ಸಮಿತಿಗಳಿಗೆ ಅವಿರೋಧ ಆಯ್ಕೆಯಾಯಿತು. ಮುಂದಿನ 1 ವರ್ಷದ ಅವಧಿಗೆ ಇವರೆಲ್ಲರೂ ಕಾರ್ಯನಿರ್ವಹಿಸಲಿದ್ದಾರೆ.
‘ನಾಲ್ಕು ಸ್ಥಾಯಿ ಸಮಿತಿಗಳ 28 ಸ್ಥಾನಗಳಿಗೆ 28 ನಾಮಪತ್ರ ಸಲ್ಲಿಕೆಯಾದ ಕಾರಣ, ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಶೀಘ್ರವೇ ದಿನಾಂಕ ಘೋಷಿಸಲಾಗುವುದು’ ಎಂದು ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ತಿಳಿಸಿದರು
Laxmi News 24×7