Home / ರಾಜಕೀಯ / ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

Spread the love

ಮೈಸೂರು, ಜುಲೈ 3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಆರೋಪಗಳು ಕೇಳಿಬರುತ್ತಿವೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು.

ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬಾಮೈದ ಜಾಗ ಕೊಟ್ಟಿದ್ದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ.

ಆದರೂ ಸಿಎಂ ಪತ್ನಿಗೆ ವಿಜಯನಗರದಲ್ಲೇ ಏಕೆ ಸೈಟ್ ಕೊಟ್ಟರು ಎಂಬ ಪ್ರಶ್ನೆ ಮೂಡಿದೆ. ಇದೇ ಪ್ರಶ್ನೆ ಈಗ ಮುಡಾದ ನಡೆ ಮೇಲೆ ಅನುಮಾನ ಬರುವಂತೆ ಮಾಡಿದೆ.ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರೋ 3ಎಕರೆ 16 ಗುಂಟೆ ಜಾಗವನ್ನ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ, ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ.

ವಿಷಯ ಏನೆಂದರೆ, ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದ ಭೂಮಿ ನೀಡಲು ತೀರ್ಮಾನಿಸಲಾಗಿತ್ತು.

ಆದರೆ, ಇದಕ್ಕೆ ಒಪ್ಪದ ಸಿಎಂ ಪತ್ನಿ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದಿದ್ದರು. 50:50ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50ಅನುಪಾತದಲ್ಲಿ ಭೂಮಿ ನೀಡಲಾಗಿದೆ ಎಂಬುದು ಆರೋಪ.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ