Breaking News

ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ʻಡೆಂಗ್ಯೂʼ ಪರೀಕ್ಷೆಗೆ 300 ರೂ. ದರ ನಿಗದಿ : ರಾಜ್ಯ ಸರ್ಕಾರ ಆದೇಶ

Spread the love

ಬೆಂಗಲೂರು : ರಾಜ್ಯದಲ್ಲಿ ಡೆಂಘಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘಿ ಪರೀಕ್ಷೆಗೆ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳಲ್ಲಿ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಹಿನ್ನೆಲೆಯಲ್ಲ ರಾಜ್ಯ ಸರ್ಕಾರ ಪರೀಕ್ಷಾ ಶುಲ್ಕಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿದೆ.

 

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ.ವಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿ ಡೆಂಗಿಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಎಲಿಸಾ ಹಾಗೂ ರಾಪಿಡ್ ಟೆಸ್‌ಗಳ ದರವನ್ನು ನಿಗದಿಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳು ಹಾಗೂ ಖಾಸಗಿ ಪ್ರಯೋಗಶಾಲೆಗಳ ಡಯಾಗೋಸ್ಟಿಕ್ ಲ್ಯಾಬೋರೇಟರಿಗಳು ಡಂಗಿಜ್ವರ ಪತ್ತೆಹಚ್ಚುವ ಪರೀಕ್ಷೆಗಳಿಗೆ ವಿವಿಧ ದರಗಳನ್ನು ವಿಧಿಸಲಾಗುತ್ತಿದೆ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಡೆಂಗಿಜ್ವರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇಲೆ ಓದಲಾದ ಕ್ರಮಾಂಕ (2)ರನ್ವಯ, ಡೆಂಗಿ ಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು (Screening test) ಪರಿಷ್ಕರಿಸಲು ಉದ್ದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಯಲ್ಲಿ ತಿಳಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಖಾಸಗಿ ಟೆಸ್ಟಿಂಗ್ ಲ್ಯಾಬ್‌ಗಳಿಗೆ ಡೆಂಗಿಜ್ವರ ಪತ್ತೆ ಹಚ್ಚುವ ELISA ಹಾಗೂ Rapid card test ದರಗಳನ್ನು ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದ್ದಾರೆ.

ಹೀಗಿದೆ ಡೆಂಗ್ಯೂ ಪತ್ತೆ ಪರೀಕ್ಷೆಯ ಪರಿಷ್ಕೃತ ದರಗಳು
1. Dengue ELISA NS1 -ರೂ.300
2. Dengue ELISA IgM – ರೂ.300
3. Screening test Rapid card test for NS1, IgM & IgM – ಒಟ್ಟು ಸೇರಿ ರೂ.250.

ಸದರಿ ಆದೇಶವನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020, ಸೆಕ್ಷನ್ 4 (1) & 4(2) k ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹೊರಡಿಸಲಾಗಿರುತ್ತದೆ.

ರಾಜ್ಯದ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗಶಾಲೆಗಳು/ ಡಯಾಗೋಸ್ಟಿಕ್ ಲ್ಯಾಬೊರೇಟರಿಗಳು ಈ ಮೇಲೆ ತಿಳಿಸಿದ ಡೆಂಗಿಜ್ವರ ಪತ್ತೆ ಪರೀಕ್ಷೆಯ ಪರಿಷ್ಕತ ದರಗಳನ್ನು ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಸೂಚಿಸಿದ್ದಾರೆ


Spread the love

About Laxminews 24x7

Check Also

ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ |

Spread the love ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Sahifa Theme License is not validated, Go to the theme options page to validate the license, You need a single license for each domain name.