ಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ

Spread the love

ಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ

ವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರು ಮತ್ತೊಮ್ಮೆ ಇಂದು (ಜುಲೈ 04) ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ವಾರದ ಹಿಂದಷ್ಟೇ ರಾಷ್ಟ್ರ ರಾಜಧಾನಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್​) ಆಸ್ಪತ್ರೆಗೆ ದಾಖಲಾಗಿದ್ದರು.

ಡಿಸ್ಚಾರ್ಜ್​ ಆದ ಬೆನ್ನಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ

ಪ್ರಸ್ತುತ ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದೆ. ಅವರನ್ನು ನಿಗಾದಲ್ಲಿ ಇರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ನರವಿಜ್ಞಾನದ ಹಿರಿಯ ಸಲಹೆಗಾರರಾದ ಡಾ. ವಿನಿತ್ ಸೂರಿ ಅವರು ವಿಶೇಷ ನಿಗಾ ವಹಿಸಿದ್ದಾರೆ. ಅಡ್ವಾಣಿಯವರ ಅನಾರೋಗ್ಯದ ವಿವರಗಳು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ 96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್​ಗೆ ದಾಖಲಿಸಲಾಗಿತ್ತು. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷ ವೈದ್ಯರ ತಂಡವು ಅಡ್ವಾಣಿ ಅವರನ್ನು ಪರೀಕ್ಷಿಸಿತು ಮತ್ತು ಜೂನ್ 27 ರಂದು ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ