ಲಕ್ನೋ: ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ.
ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಪೊಲೀಸ್ ಪೇದೆಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶಂಕಿತ ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. ಕಾನ್ಪುರ ಪೊಲೀಸರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪೊಲೀಸರು ಮಧ್ಯಪ್ರದೇಶದ ಉಜ್ಜೈನ್ ನಲ್ಲಿರುವ ಮಹಾಕಾಳ ದೇವಸ್ಥಾನದಲ್ಲಿ ಬಂಧಿಸಿದ್ದರು. ಉಜ್ಜೈನ್ ನಿಂದ ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಕಾಸ್ ದುಬೆಯನ್ನು ಎನ್‍ಕೌಂಟರ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದ್ರೆ ಇದು ನಕಲಿ ಎನ್‍ಕೌಂಟರ್ ಎಂದು ವಿಪಕ್ಷಗಳು ಆರೋಪಿಸಿವೆ.