Breaking News

ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ 7 ಮಂದಿಗೆ ಗಂಭೀರ ಗಾಯ

Spread the love

ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ.

ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗಾಯಾಳುಗಳು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲ್ವಾ ಗ್ರಾಮದ ನಿವಾಸಿಗಳಿಂದ ತಿಳಿದು ಬಂದಿದೆ. ಎಲ್ಲರೂ ಕೆಲಸ ಅರಸಿ ಬೆಂಗಳೂರಿನತ್ತ ಹೊರಟಿದ್ದರು. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಲೆ ಮರೆಯಲ್ಲಿ ಬೆತ್ತಲಾದ ನಟಿ

Spread the loveಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾ ಮೂಲಕ ಕಿಯಾರಾ ಅಡ್ವಾಣಿ ಅಭಿಮಾನಿಗಳ ಮನಗೆದ್ದಿದ್ದಾರೆ. ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ