Breaking News

ರೈತರೇ ಗಮನಿಸಿ : ಈ ತಿಂಗಳೊಳಗೆ ತಪ್ಪದೇ ʻRTC-ಆಧಾರ್‌ಕಾರ್ಡ್‌ʼ ಲಿಂಕ್‌ ಮಾಡಿ

Spread the love

ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್‌ ಟಿಸಿಗಳನ್ನು ಆಧಾರ್‌ ಗೆ ಲಿಂಕ್‌ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ.ರೈತರೇ ಗಮನಿಸಿ : ಈ ತಿಂಗಳೊಳಗೆ ತಪ್ಪದೇ ʻRTC-ಆಧಾರ್‌ಕಾರ್ಡ್‌ʼ ಲಿಂಕ್‌ ಮಾಡಿ

ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್‌ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್‌ಟಿಸಿಗಳನ್ನು ಮಾತ್ರ ಆಧಾರ್‌ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್‌ ಸೀಡಿಂಗ್‌ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್‌ ಮಾಡುವ ಮೂಲಕ ಯಾರದ್ದೋ ಜಮೀನನ್ನು ಮತ್ಯಾರೋ ಮಾರಾಟ ಮಾಡುವಂತಹ ವಂಚನೆಗಳನ್ನು ತಡೆಯಬಹುದು. ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್‌, ಇನ್ಪುಟ್‌ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಪ್ಪಿಸಿ ಆಧಾರ್‌ ಜೋಡಣೆ ಮಾಡಬೇಕು. ಸಾರ್ವಜನಿಕರೂ ಸಹ ತನಮ್ಮ ಜಮೀನಿನ ಮಾಲೀಕತ್ವಕ್ಕೆ ಭದ್ರತೆ ಅಗತ್ಯವಿದ್ದರೆ ಅಭಿಯಾನಕ್ಕೆ ರೈತರು ಮುಂದೆ ಬಂದು ಸಹಕಾರ ನೀಡಬೇಕು. ಇದರ ಮೂಲಕ ನಕಲಿ ವ್ಯವಹಾರ ಆಗುವುದನ್ನು ತಡೆಯಬಹುದು. ಜಮೀನಿನ ಮಾಲೀಕತ್ವಕ್ಕೆ ನೆಮ್ಮದಿಯ ಗ್ಯಾರಂಟಿ ನೀಡಬಹುದು ಎಂದು ಅವರು ಕರೆ ನೀಡಿದರು.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ