Breaking News

ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

Spread the love

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅದರಂತೆ ನ್ಯಾಯಾಲಯ ಡಿ.7ರವರೆಗೆ ಅಂದರೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ