Breaking News

ಹುಬ್ಬಳ್ಳಿಯಲ್ಲಿ ಡೆಂಗ್ಯೂಗೆ ನಾಲ್ವರು ಸಾವು

Spread the love

ಬೆಂಗಳೂರು, ಜುಲೈ 07: ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಜನರನ್ನ ಕಾಡುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 175 ಡೆಂಗ್ಯೂ ಕೇಸ್ ದೃಢಪಟ್ಟಿವೆ. ಬೆಂಗಳೂರಿನಲ್ಲೇ 115 ಕೇಸ್​ಗಳು ದಾಖಲಾಗಿವೆ.

ರಾಜ್ಯದಲ್ಲಿ ಜನವರಿ 1ರಿಂದ ನಿನ್ನೆ ವರೆಗೆ ಒಟ್ಟು 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಹುಬ್ಬಳ್ಳಿಯಲ್ಲಿ ಡೆಂಗ್ಯೂಗೆ ನಾಲ್ವರು ಸಾವು: ಮೂರು ದಿನದಲ್ಲಿ ಮೈಸೂರಿನಲ್ಲಿ ಇಬ್ಬರು ಮೃತ

 

ಮೈಸೂರಿನಲ್ಲಿ 3 ದಿನಕ್ಕೆ ಇಬ್ಬರು ಸಾವನ್ನಪ್ಪಿದ್ದರೆ, ಹುಬ್ಬಳ್ಳಿಯಲ್ಲಿ (Hubballi) ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್​, ಪಿಡಿಯಾರ್ಟಿಕ್ ವಾರ್ಡ್​​ನಲ್ಲಿ ಡೆಂಗ್ಯೂಯಿಂದ ನಾಲ್ವರು ಮೃತಪಟ್ಟಿದ್ದಾರೆ.

ಕಿಮ್ಸ್​ ಆಸ್ಪತ್ರೆಯ ಮೆಡಿಸನ್ ವಾರ್ಡ್​ನಲ್ಲಿ ಯಾವುದೇ ಸಾವು ಆಗಿಲ್ಲ. ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂಯಿಂದ ಯಾವುದೇ ಡೆತ್​​ ಆಗಿಲ್ಲ.

ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವಾಗಿವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ