ಹುಬ್ಬಳ್ಳಿ: ‘ರಾಜ್ಯ ಸರ್ಕಾರ ಡೆಂಗಿ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
ನಗರದ ಕಿಮ್ಸ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಡೆಂಗಿಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಔಷಧ, ಪರೀಕ್ಷೆಗೆ ಪ್ರತ್ಯೇಕವಾಗಿ ಹೆಚ್ಚುವರಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ, ಕಿಮ್ಸ್ ನಿರ್ದೇಶಕ ಡಾ.ಎಸ್.ಎಫ್.ಕಮ್ಮಾರ ಇದ್ದರು.