Breaking News

ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು:ಸತೀಶ್ ಜಾರಕಿಹೊಳಿ

Spread the love

ರಾಯಚೂರು: ಮಸ್ಕಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶ ಹಾಗೂ ಆರ್.ಬಸನಗೌಡ ಅವರ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವ ಮುಖಂಡರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ವೇದಿಕೆಗೆ ಕರೆತರಲಾಯಿತು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ.

ಮಸ್ಕಿ: ಪಕ್ಷದ ಗೆಲುವಿಗಾಗಿ ನೀವು ತೋರಿರುವ ಬೆಂಬಲ, ಪ್ರೀತಿ, ಉತ್ಸಾಹ, ಹುಮ್ಮಸ್ಸು ಚುನಾವಣೆ ಮುಗಿಯುವ ತನಕ ಹೀಗೆ ಮುಂದುವರಿಯಲಿ, ತಾವೆಲ್ಲ ಬಸನಗೌಡ ತುರ್ವಿಹಾಳರ ಗೆಲುವಿಗಾಗಿ ಇದೆ ರೀತಿ ಬೆಂಬಲವನ್ನು ನೀಡಿದರೆ ಮಸ್ಕಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಸಮಾವೇಶದಲ್ಲಿ ನೆರೆದಿದ್ದ ಕಾಂಗ್ರೆಸ್‍ನ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಉದ್ದೇಶಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿದರು.

ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23ರಂದು ಆಯೋಜಿಸಿದ್ದ ಬೃಹತ್ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಹಿಂದೆ ಬಿದ್ದ ಪಕ್ಷವಲ್ಲ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವ ಪಕ್ಷವಾಗಿದೆ. ಸೌಹರ್ದತೆಯನ್ನು ಕಾಪಾಡಿ ದೇಶದಲ್ಲಿ ಶಾಂತಿ ನೆಲೆಸುವುದು ಕಾಂಗ್ರೆಸ್‍ನ ಉದ್ದೇಶವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಆಡಳಿತದಲ್ಲಿ ಇದ್ದಾಗ ರಾಯಚೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿ, ಶಿಕ್ಷಣ ಸೇರಿದಂತೆ ಅಭಿವೃದ್ಧಿಯ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.

ಕಳಪೆಯಾಗಿರುವ ಕೇಂದ್ರ ಸರಕಾರದ ಕಳೆದ 7ವರ್ಷದ ಸಾಧನೆ ಹಾಗೂ  ರಾಜ್ಯ ಸರಕಾರದ 1 ವರ್ಷದ ಸಾಧನೆಯನ್ನು ಸಿಎಂ ಯಡಿಯೂರಪ್ಪ ಮಸ್ಕಿಯಲ್ಲಿ ಹೇಳಲು ಬರಬಹುದು. ಆದರೆ ಅವರು ಹೇಳುವುದ್ದೆಲ್ಲ ಸುಳ್ಳಾಗಿರುತ್ತದೆ. ಬಿಜೆಪಿಯು ಜನರನ್ನು ಭಾವನಾತ್ಮಾಕವಾಗಿ ಜನರನ್ನು ಮೋಸ ಮಾಡುತ್ತಿದೆ. ಜಾತಿ, ನಿಗಮ, ಧರ್ಮ, ಸಚಿವ ಸಂಪುಟದ ವಿಷಯಗಳಲ್ಲೆ ಬಿಜೆಪಿಯು ನಿರತವಾಗಿದೆ. ರಾಜ್ಯದ ಅಭಿವೃದ್ಧಿ ಕುಸಿದು ಹೋಗಿದೆ. ಸರಕಾರವು ಅಭಿವೃದ್ಧಿಯ ಕಡೆ ಗಮನಹರಿಸುತ್ತಿಲ್ಲ ಎಂದು ಅವರು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ, ಡಿ.ಎಸ್.ಹೂಲಗೇರಿ, ಬಸನಗೌಡ ದದ್ದಲ್, ರಾಘವೇಂದ್ರ ಹಿಟ್ನಾಳ್, ಬಸವರಾಜ ಪಾಟೀಲ್ ಇಟಗಿ, ಮಾಜಿ ಶಾಸಕರಾದ ಎನ್.ಎಸ್.ಬೋಸರಾಜು, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ್, ಶಿವರಾಜ ತಂಗಡಗಿ ಶರಣಪ್ಪ ಮಟ್ಟೂರು, ಮುಖಂಡರಾದ ಎ.ವಸಂತಕುಮಾರ್, ಮಲ್ಲಿಕಾರ್ಜುನ, ಹನುಮಂತಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags : #maski


Spread the love

About Laxminews 24x7

Check Also

ಏಳು ತಿಂಗಳ ಬಾಕಿ ಸಂಬಳ ಕೊಡಿ’

Spread the love ರಾಯಚೂರು: ‘ಜಿಲ್ಲೆಯಲ್ಲಿ ವಿವಿಧ ವೃಂದ ಹೊರ ಗುತ್ತಿಗೆ ನೌಕರರಿಗೆ ಬಾಕಿ ಉಳಿದಿರುವ ಏಳು ತಿಂಗಳ ವೇತನವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ