Breaking News

BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ.!

Spread the love

BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ನ್ಯೂಸ್‌: ಶೀಘ್ರದಲ್ಲಿ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ.!

ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ.

ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಇದೇ ವೇಳೇ ಅವರು ಮಾತನಾಡಿ ವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3784 ಅರ್ಜಿಗಳು ಇತ್ಯರ್ಥಪಡಿಸಲು ಬಾಕಿಯಿದ್ದು ಸಕಾಲದ ಅವಧಿಯ ಮಿತಿಯಲ್ಲಿಯೇ ಇವೆ. ಇನ್ನು ಮುಂದೆ 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು. ರಾಜ್ಯದಲ್ಲಿ 76 ಲಕ್ಷ ಜನರಿಗೆ ಪಿಂಚಣಿ ನೀಡುತ್ತಿದ್ದು, ದೇಶದಲ್ಲೇ ಅಧಿಕವಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎನ್‌ಪಿಸಿಐ ಮ್ಯಾಪಿಂಗ್‌ ಮಾಡುವಲ್ಲಿ 2 ಲಕ್ಷ ಪ್ರಕರಣಗಳು ಬಾಕಿಯಿವೆ. ಇದನ್ನು ಆದ್ಯತೆ ಮೇರೆಗೆ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಎಷ್ಟು ಪಿಂಚಣಿ ಅರ್ಜಿಗಳು ಬಾಕಿಯಿವೆ ಎಂಬುವುದನ್ನು ಆಯಾ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕೂಡಲೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿ ಸಾವು ಸಂಭವಿಸಿದ ತಕ್ಷಣ ಆಯಾ ಪಿಂಚಣಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು ಅಂತ ತಿಳಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ