Breaking News

ವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

Spread the love

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು, ಯುವಕರ ಗುಂಪೊಂದು ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿ ಶಾಲೆಯ ಬಳಿಯೇ ವಿದ್ಯಾರ್ಥಿಯನ್ನು ಹಿಡಿದು ಯುವಕರ ಗುಂಪೊಂದು ಮನ ಬಂದಂತೆ ಥಳಿಸಿತ್ತು.

ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದರು. ಇದನ್ನು ಕಂಡ ಇತರ ವಿದ್ಯಾರ್ಥಿಗಳು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದರು.ವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

ಪ್ರಾಂಶುಪಾಲರು ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬಂಧಿತರು ವಿವಿಧ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.

ಇದೇ ವೇಳೆ ಪೊಲೀಸರು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರು ಹಾಗೂ ಪೋಷಕರು ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ