Breaking News

ಬಿಜೆಪಿ ತೊರೆದು ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆಯಾದರು.

Spread the love

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ತುಂಗಭದ್ರಾ ಕಾಡಾ ಮಾಜಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಅವರು ಬಿಜೆಪಿ ತೊರೆದು ಸಾವಿರಾರು ಬೆಂಬಲಿಗರ ಜೊತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಹಾಗೂ ಹಲವು ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾದರು.

ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸೇರ್ಪಡೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಆರ್.ಬಸನಗೌಡ ತುರ್ವಿಹಾಳ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ, ಡಿ.ಎಸ್.ಹೂಲಗೇರಿ, ಬಸನಗೌಡ ದದ್ದಲ್, ರಾಘವೇಂದ್ರ ಹಿಟ್ನಾಳ್, ಬಸವರಾಜ ಪಾಟೀಲ್ ಇಟಗಿ, ಮಾಜಿ ಶಾಸಕರಾದ ಎನ್.ಎಸ್.ಬೋಸರಾಜು, ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ್, ಶಿವರಾಜ ತಂಗಡಗಿ ಶರಣಪ್ಪ ಮಟ್ಟೂರು, ಮುಖಂಡರಾದ ಎ.ವಸಂತಕುಮಾರ್, ಮಲ್ಲಿಕಾರ್ಜುನ, ಹನುಮಂತಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಮಾಜಿ ಸಚಿವನಿಗೆ ನವಿಲಿನ ಗರಿ ಹಾರ ಹಾಕಿದ ಅಭಿಮಾನಿಗಳು; ದೂರು ದಾಖಲಾಗ್ತಿದ್ದಂತೆ ಸ್ಪಷ್ಟನೆ ಕೊಟ್ಟ ಶಿವನಗೌಡ ನಾಯಕ್​​

Spread the love ರಾಯಚೂರು : ಮಾಜಿ ಸಚಿವ ಕೆ. ಶಿವನಗೌಡ ನಾಯಕ ಜನ್ಮದಿನದಂದು ಅಭಿಮಾನಿಗಳು ನವಿಲುಗರಿ ಹಾರ ಹಾಕಿರುವ ವಿಚಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ