Breaking News

2ಎ ಮೀಸಲಾತಿಗಾಗಿ ಯಾವ ತ್ಯಾಗಕ್ಕೂ ಸಿದ್ಧ: ಶಾಸಕ ರಾಜು ಕಾಗೆ

Spread the love

ಕಾಗವಾಡ: ‘ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ‍‍ಪಡೆಯುವುದಕ್ಕಾಗಿ ನಾನು ಯಾವ ಹುದ್ದೆ ತ್ಯಜಿಸಲೂ ಸಿದ್ಧ’ ಎಂದು ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿದರು.

ಸಮೀಪದ ಉಗಾರ ಖುರ್ದ್‌ ಗ್ರಾಮದಲ್ಲಿ ಸೋಮವಾರ ನಡೆದ ಮೀಸಲಾತಿಗಾಗಿ ಹೋರಾಟ ಪೂರ್ವಭಾವಿ ಸಭೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಅವರು, ‘ಮೀಸಲಾತಿ ಪಡೆಯಲು ಪಂಚಮಸಾಲಿ ಸಮುದಾಯದ ಎಲ್ಲ ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಿದರೆ, ಯಾವುದೇ ಸರ್ಕಾರವಿದ್ದರೂ ಮಂಡಿ ಊರಬೇಕಾಗುತ್ತದೆ.2ಎ ಮೀಸಲಾತಿಗಾಗಿ ಯಾವ ತ್ಯಾಗಕ್ಕೂ ಸಿದ್ಧ: ಶಾಸಕ ರಾಜು ಕಾಗೆ

ಮೀಸಲಾತಿಗಾಗಿ ನಾನು ಎಂಥ ತ್ಯಾಗವನ್ನೂ ಮಾಡಲು ಸಿದ್ಧವಿದ್ದೇನೆ’ ಎಂದರು.

ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ನಾವು ಅನ್ಯ ಸಮುದಾಯಗಳ ವಿರೋಧಿಗಳಲ್ಲ. ಶೈಕ್ಷಣಿಕವಾಗಿ ಹಿಂದುಳಿದ ನಮ್ಮ ಸಮುದಾಯಕ್ಕೂ ಮೀಸಲಾತಿ ನೀಡಬೇಕು ಎಂಬುದು ನಮ್ಮ ಬೇಡಿಕೆ. ಮೀಸಲಾತಿ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಕೋರಲು, ರಾಜು ಕಾಗೆ ಅವರ ಮನೆಗೆ ಆಗಮಿಸಿ ಮನವಿ ನೀಡುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದು ಹೇಳಿದರು.

ಆರ್.ಕೆ.ಪಾಟೀಲ, ನಿಂಗಪ್ಪ ಪೀರೋಜೆ, ಮೃಣಾಲ್‌ ಹೆಬ್ಬಾಳಕರ ಇತರರಿದ್ದರು.


Spread the love

About Laxminews 24x7

Check Also

ಹಬ್ಬದ ಅವಧಿಯಲ್ಲಿ ಗುರಿ ಮೀರಿದ ಸಾಧನೆ; 1,100 ಮೆಟ್ರಿಕ್ ಟನ್ ನಂದಿನಿ ಸಿಹಿ ಉತ್ಪನ್ನ ಮಾರಾಟ: ಸಚಿವ ಕೆ.ವೆಂಕಟೇಶ್

Spread the love ಬೆಂಗಳೂರು: ಈ ಬಾರಿ ಹಬ್ಬದ ಅವಧಿಯಲ್ಲಿ ಗುರಿ ಮೀರಿ ನಂದಿನಿ ಸಿಹಿ ತಿಂಡಿ ಉತ್ಪನ್ನಗಳ ಮಾರಾಟವಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ