ದಾವಣಗೆರೆ : ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹರಿಹರ ನಗರಸಭೆ ಆಯುಕ್ತರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ನಗರಸಭೆ ಆಯುಕ್ತ ಬಸವರಾಜ್ ಐಗೂರು ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ.
ಬಸವರಾಜ್ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರಸಭೆಯ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಸಾಮಗ್ರಿ ಸರಬರಾಜು ಗುತ್ತಿಗೆದಾರ ಕರಿಬಸಪ್ಪ ಎಂಬುವರಿಂದ 2 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
Laxmi News 24×7