ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದಾರೆ.
ಮೂಡಾ ಹಗರಣದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳೂ ಶಾಮಿಲಾಗಿರುವ ಬಗ್ಗೆಯೂ ದೂರು ದಾಖಲಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ರಾಜ್ಯಪಾಲರು, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಖೆ ಪ್ರಧಾನ ಕಾರ್ಯದರ್ಶಿಗಳಿಗೂ ಪತ್ರ ಬರೆದಿದ್ದಾರೆ.
Laxmi News 24×7