ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಇದೀಗ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ತಮಗೆ ಊಟ, ಹಾಸಿಗೆ, ಪುಸ್ತಕಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ನಟ ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳು ಜೈಲುಪಾಲಾಗಿದ್ದು, ಪೊಲೀಸರು ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ಈ ನಡುವೆ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
Laxmi News 24×7