Breaking News

ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಹೋಮ್ ಗಾರ್ಡ್

Spread the love

ಪೊಲೀಸ್ ಠಾಣೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಹೋಮ್ ಗಾರ್ಡ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಿಂತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ.

ವೈರಲ್ ಆಗಿರುವ ವಿಡಿಯೋ ರಾಜಸ್ಥಾನದ ಅಜ್ಮೀರ್‌ನಿಂದ ಬಂದಿದೆ ಎನ್ನಲಾಗಿದೆ. ಅಲ್ಲಿನ ಪೊಲೀಸ್ ಠಾಣೆ ಬಳಿ ಕೆಲಸ ನಿರ್ವಹಿಸುತ್ತಿದ್ದ ಹೋಮ್ ಗಾರ್ಡ್ ಏಕಾಏಕಿ ಕುಸಿದು ಬಿದ್ದಿದ್ದಾನೆ.

ಕೆಲ ಕ್ಷಣ ನೋವಿನಿಂದ ಒದ್ದಾಡುತ್ತಾ ಪ್ರಾಣ ಬಿಟ್ಟಿರುವುದನ್ನು ವಿಡಿಯೋದಲ್ಲಿ ಕಾಣಬಹುದು.ಮಾಹಿತಿ ಪ್ರಕಾರ ಹೋಮ್ ಗಾರ್ಡ್ ಹೆಸರು ಹರಿರಾಮ್ ಗುರ್ಜರ್(35). ಈತ ಡಿಟಿಎಚ್ ಸಂಪರ್ಕ ಕಚೇರಿಯಲ್ಲಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿದ್ದ.

ಜುಲೈ 5ರಂದು ಕಚಾರಿ ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ಗೆ ಹೋಗಿದ್ದು, ಕೆಲಸದಲ್ಲಿರುವಾಗಲೇ ಏಕಾಏಕಿ ಕುಸಿದು ಬಿದ್ದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ