Breaking News

ಕರ್ನಾಟಕ ಬಂದ್‍ಗೆ ಬೆಂಬಲ ನೀಡಿ: ಸಾ.ರಾ.ಗೋವಿಂದು

Spread the love

ಬೆಂಗಳೂರು, ನ.23- ಕನ್ನಡಿಗರ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಇಂದು ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ನಮ್ಮವರಿಂದಲೇ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಹಾಗಾಗಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಿ ಕನ್ನಡವನ್ನು, ಕನ್ನಡಿಗರನ್ನು ಕಾಪಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕಾಗಿ ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದ್ದೇವೆ.

ಎಲ್ಲರೂ ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮನವಿ ಮಾಡಿದರು. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಸಿ ಬಳ್ಳಾರಿಯ ಜಿಲ್ಲಾಕಾರಿ ಕಚೇರಿ ಎದುರು ಕನ್ನಡ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ಅವರು ಕನ್ನಡ ನಾಡು-ನುಡಿ-ಸಂಸ್ಕøತಿ ಮೇಲೆ ನಿರಂತರ ಅನ್ಯಾಯವಾಗುತ್ತಿದೆ.

ಇದಕ್ಕಾಗಿ ಹೋರಾಟ ಮಾಡುತ್ತಿರುವ ಕನ್ನಡಪರ ಹೋರಾಟಗಾರರನ್ನು ಅಪಹಾಸ್ಯ ಮಾಡುವ, ನಿಂದನೆ ಮಾಡುವ ಕೆಲಸಗಳು ನಡೆಯುತ್ತಿವೆ. ಬಂದ್ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ. ಇದಾವುದಕ್ಕೂ ಕಿವಿಗೊಡಬೇಡಿ ಎಂದರು. ರಾಜ್ಯ ಸರ್ಕಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಹಿತಾಸಕ್ತಿಯನ್ನು ಬಲಿ ಕೊಡಲು ಮುಂದಾಗಿದೆ. ಇದಕ್ಕಾಗಿ ರಾಜ್ಯಾದ್ಯಂತ ಹೋರಾಟ ರೂಪಿಸಿದ್ದೇವೆ. ಎಲ್ಲರ ಬೆಂಬಲ ಅಗತ್ಯ ಎಂದು ಹೇಳಿದರು.


Spread the love

About Laxminews 24x7

Check Also

ಆರ್​ಎಸ್​ಎಸ್​ ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪರಿಶೀಲನೆ

Spread the loveಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ