ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು.

ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ.
ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ಥ್ ನಿಯೋಜಿಸಲಾಗಿದೆ.
Laxmi News 24×7