ಧಾರಾಕಾರ ಮಳೆ , ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರಳಿದ ಲಾರಿ

Spread the love

ಧಾರಾಕಾರ ಮಳೆ ಹಿನ್ನೆಲೆ: ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರಳಿದ ಲಾರಿ

ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಕರ್ನಾಟಕ-ಗೋವಾ ರಾಜ್ಯ ಹೆದ್ದಾರಿಯ ಚೊರ್ಲಾ ಬಳಿ ಭೀಕರ ಘಟನೆ ನಡೆದಿದೆ. ರಸ್ತೆ ಪಕ್ಕದ ಮಣ್ಣು ಕುಸಿದು, ಲಾರಿ ಪ್ರಪಾತಕ್ಕೆ ಉರಳಿದೆ.

ಘಟನೆಯ ತಕ್ಷಣ, ಜೆಸಿಬಿ ಸಹಾಯದಿಂದ ಲಾರಿಯನ್ನು ಪಕ್ಕಕ್ಕೆ ತರುವ ಕಾರ್ಯಾಚರಣೆ ಆರಂಭಗೊಂಡಿತು. ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಲಾರಿ ಉರಳಿ ಬೀಳುವ ದೃಶ್ಯವನ್ನು ಸೆರೆಹಿಡಿದಿದ್ದಾರೆ.

ಕರ್ನಾಟಕದ ಗಡಿ ಭಾಗದಲ್ಲಿ ನಡೆದ ಈ ಘಟನೆ ಹಲವು ಪ್ರಯಾಣಿಕರಿಗೆ ತೀವ್ರ ಆತಂಕ ಮೂಡಿಸಿದೆ. ಘಟನೆ ನಡೆದ ಸ್ಥಳದಲ್ಲಿ ರಸ್ತೆಯ ಅಸುರಕ್ಷತೆ ಹಾಗೂ ನಿರಂತರ ಮಳೆಯಿಂದ ಉಂಟಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಜನತೆಯನ್ನು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಬೆಲೆ ಏರಿಕೆ ನಡುವೆ BSNL ಗ್ರಾಹಕರಿಗೆ ಗುಡ್ ನ್ಯೂಸ್

Spread the love ನವದೆಹಲಿ: ಭಾರತದಲ್ಲಿನ ಟೆಲಿಕಾಂ ಸೇವಾ ಪೂರೈಕೆದಾರರು ಇತ್ತೀಚೆಗೆ ತಮ್ಮ ರೀಚಾರ್ಜ್ ಬೆಲೆಗಳನ್ನು ನವೀಕರಿಸಿದ್ದಾರೆ. ರಿಲಯನ್ಸ್ ಜಿಯೋ, ಏರ್‌ಟೆಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ