Breaking News

ಕುಮಟಾ | ಹೊಳೆಗೆ ಉರುಳಿದ ಖಾಲಿ ಗ್ಯಾಸ್ ಟ್ಯಾಂಕರ್

Spread the love

ಕುಮಟಾ: ಹೆದ್ದಾರಿ ಬದಿಯ ಹೊಳೆಗೆ ಖಾಲಿ ಗ್ಯಾಸ್ ಟ್ಯಾಂಕರ್ ಹೊತ್ತ ಲಾರಿ ಉರುಳಿ ಬಿದ್ದು ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಪಟ್ಟಣದ ಹೊನಮಾಂವ್ ಬಳಿ ನಡೆದಿದೆ.

ಖಾಲಿ ಟ್ಯಾಂಕರ್ ಹೊತ್ತ ಲಾರಿ ಗೋವಾದಿಂದ ಮಂಗಳೂರಿಗೆ ಹೋಗುತ್ತಿತ್ತು. ವಾಹನದ ಎದುರು ಬೈಕ್ ಬಂದಾಗ ಅಪಾಯ ಸಂಭವಿಸುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿದ ಲಾರಿ ಪಕ್ಕದ ಹೊಳೆಗೆ ಉರುಳಿದೆ.

ಲಾರಿ ಚಾಲಕ ಜಾರ್ಖಂಡ್ ಮೂಲದ ಬಿರೇಂದರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಪಿ.ಎಸ್.ಐ ಮಂಜುನಾಥ ಗೌಡರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ