Breaking News

NEP’ ಜಾರಿಗೆ ಸೂಚಿಸಲು ಕೋರಿ ಅರ್ಜಿ ಸಲ್ಲಿಕೆ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the love

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಸೂಚಿಸಲು ಕೋರಿ ಗಿರೀಶ್ ಭಾರದ್ವಾಜ್ ಹಾಗೂ ಆರ್. ಆನಂದ ಮೂರ್ತಿ ಎಂಬುವವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್​ 1ಕ್ಕೆ ಮುಂದೂಡಿತು.

'NEP' ಜಾರಿಗೆ ಸೂಚಿಸಲು ಕೋರಿ ಅರ್ಜಿ ಸಲ್ಲಿಕೆ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್​ 1ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಈ ಮೂಲಕ ಯು-ಟರ್ನ್ ತೆಗೆದುಕೊಂಡಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ತೀವ್ರ ತರದ ತೊಂದರೆಯಾಗಲಿದೆ. ಆದ್ದರಿಂದ ಎನ್​ಇಪಿ ಜಾರಿಗೆ ನಿರ್ದೇಶನ ನಿಡಬೇಕು ಎಂದು ಕೋರಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ