Breaking News

2ಎ ಮೀಸಲಾತಿಗೆ ಸದನದಲ್ಲಿ ಆಗ್ರಹಿಸುವೆ: ಶಾಸಕ ಕಾಶಪ್ಪನವರ

Spread the love

ಳಕಲ್: ‘ಲಿಂಗಾಯತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಅಡಿ ಸೇರಿಸಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ 28 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲದು, ಸಂದರ್ಭ ಬಂದರೆ ಅಧಿಕಾರ ತ್ಯಾಗ ಮಾಡಿ ಹೋರಾಟದಲ್ಲಿ ಪಾಲ್ಗೊಳ್ಳುವೆ’ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

2ಎ ಮೀಸಲಾತಿಗೆ ಸದನದಲ್ಲಿ ಆಗ್ರಹಿಸುವೆ: ಶಾಸಕ ಕಾಶಪ್ಪನವರ

ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿ ನೀಡಿದ ಆಗ್ರಹ ಪತ್ರ ಸ್ವೀಕರಿಸಿ, ಮಾತನಾಡಿದರು.

‘ಸ್ವಾಮೀಜಿ ಅವರೊಂದಿಗೆ ನಾನೂ ಕೂಡಲಸಂಗಮದಿಂದ ಬೆಂಗಳೂರಿನವರೆಗೂ 750 ಕಿ.ಮೀ ಪಾದಯಾತ್ರೆಯಲ್ಲಿ ಭಾಗವಹಿಸಿ, ಸಮಾಜದ ಪರವಾಗಿ ದನಿ ಎತ್ತುತ್ತಾ ಬಂದಿರುವೆ. ಪಂಚಮಸಾಲಿ ಸಮಾಜಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಅಧಿಕಾರಕ್ಕಿಂತ ಸಮಾಜದ ಹಿತ ಮುಖ್ಯ. ಅಧಿವೇಶನದಲ್ಲಿ ಮೀಸಲಾತಿಗಾಗಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವೆ’ ಎಂದು ಹೇಳಿದರು.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ