Breaking News

ಭ್ರಷ್ಟಾಚಾರ ಆರೋಪ ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ

Spread the love

ಬೆಂಗಳೂರು : ವಾಲ್ಮೀಕಿ ‌ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪದಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರನನ್ನು ವಶಕ್ಕೆ ಪಡೆದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ ಅನೇಕರು ಕೊಳ್ಳೆ ಹೊಡೆದ ಆರೋಪದಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ನಿನ್ನೆಯಿಂದ ಇಡಿ ಅಧಿಕಾರಿಗಳು ನಾಗೇಂದ್ರ ಮನೆಯ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಸಧ್ಯ ಬಿ. ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದಿದೆ.

 

ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ

 

ಇ.ಡಿ ಅಧಿಕಾರಿಗಳ ಭರ್ಜರಿ ಬೇಟೆಯಲ್ಲಿ ಸಧ್ಯ ಸಿದ್ದು ಸರ್ಕಾರದ ಮಾಜಿ ಸಚಿವರೊಬ್ಬರ ಬಂಧನವಾಗಿದ್ದು ಇದು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಸಧ್ಯ ತಾನೇ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ