ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ.
ನ್ಯಾ. ಸಂತೋಷ್ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ.
ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ರಾತ್ರಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.
ಇಂದು ಬೆಳಿಗ್ಗೆ ಅವರನ್ನು ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದು ಜಡ್ಜ್ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಇಡಿ ಮನವಿ ಹಿನ್ನಲೆಯಲ್ಲಿ ಜು. 18ರವರೆಗೆ ಕಸ್ಟಡಿಗೆ ನೀಡಲಾಗಿದೆ
Laxmi News 24×7