Breaking News

ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Spread the love

ಹುಬ್ಬಳ್ಳಿ: ಒಂದೂವರೆ ವರ್ಷದಲ್ಲಿ ಸರ್ಕಾರ ಹಾಗೂ ರಾಹುಲ್ ಗಾಂಧಿ, ಇನ್ನಿತರ ನಾಯಕರಿಂದ ಭಯಂಕರ ಭ್ರಷ್ಟಾಚಾರ ಶುರುವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ‌ ಸಾವಿರಾರು ಕೋಟಿ ರೂ.

ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ ಎಂದಾಗ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ನೂರಾರು ಜನರಿಗೆ ವರ್ಗಾವಣೆ ಮಾಡಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಕೆಲ ಪ್ರಮುಖ ಅಧಿಕಾರಿಗಳು ಸಿಕ್ಕಿದ್ದಾರೆ. ಹೈದರಾಬಾದ್ ಕಂಪನಿಗಳಿಗೆ ಹಣ ಹೋಗಿದೆ. ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರಗೆ ಗೊತ್ತಿದ್ದೆ ಮಾಡಿದ್ದು ಎಂದು ಆರೋಪಿಸಿದರು.

ಯಾವುದೇ ಆರೋಪ ಇಲ್ಲದೆ ನಮ್ಮ ಮೇಲೆ 40 ಪರ್ಸೆಂಟ್ ಕಮೀಷನ್ ಅರೋಪ ಮಾಡಿದರು. ಆದರೆ ಇದು 100 ಪರ್ಸೆಂಟ್ ಭ್ರಷ್ಟ ಸರ್ಕಾರ ಎಂದು ಹರಿಹಾಯ್ದರು.

ಐಷಾರಾಮಿ ಕಾರು ಖರೀದಿ ಮಾಡಿದ್ದಾರೆ. ಇವರ ರಕ್ಷಣೆಗೆ ಸಿದ್ದರಾಮಯ್ಯ ನಿಂತಿದ್ದಾರೆ. ರಾಹುಲ್ ಗಾಂಧಿ ಈ ಬಗ್ಗೆ ಇಂದಿನವರೆಗೂ ಒಂದು ಮಾತಾಡಿಲ್ಲ. ಇದಕ್ಕೆ ರಾಹುಲ್ ಮತ್ತು ಸಿದ್ದರಾಮಯ್ಯ ಇಬ್ಬರು ಜವಾಬ್ದಾರರು. 40 ದಿನವಾದರೂ ನಾಗೇಂದ್ರಗೆ ನೋಟೀಸ್ ಕೊಟ್ಟಿರಲಿಲ್ಲ. ಇಡಿ ಪ್ರವೇಶಿಸಿದಾಗ ನೋಟೀಸ್ ಕೊಟ್ಟಿದ್ದಾರೆ. ಐಶಾರಾಮಿ ಹೋಟೆಲ್‌ ಗೆ ಕರೆದು ವಿಚಾರಣೆ ಮಾಡುವ ನಾಟಕ ಮಾಡಿದರು. ಹೋಟೆಲ್‌ ನ ಬಿಲ್ ಕಟ್ಟಿದ್ದು ಕೂಡ ಎಸ್‌ಐಟಿ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ