ಬೆಂಗಳೂರು: ರಾಜ್ಯ ಸರ್ಕಾದ ವಿರುದ್ಧದ ಹಗರಣಗಳು, ಮುಡಾ ಅಕ್ರಮ, ವಾಲ್ಮೀಕಿ ನಿಗದಮ ಅವ್ಯವಹಾರ ಸೇರಿದಂತೆ ವಿವಿಧ ಅಕ್ರಮಗಳ ವಿರುದ್ಧ ನಾಳೆ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿತ್ತು. ಆದ್ರೇ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು.
ನಾಳೆ ಮುಡಾ ಸೈಟ್, ವಾಲ್ಮೀಕಿ ಅಕ್ರಮ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧರಿಸಿತ್ತು.
ಆದ್ರೇ ಬಿಜೆಪಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿದ್ದಂತ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯೋದು ಡೌಟ್ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.