Breaking News

ಹಲವು ವರ್ಷಗಳಿಂದ ಒಂದೇ ಸ್ಥಳ, ಕಂದಾಯ ಇಲಾಖೆ ಅಧಿಕಾರಿಗಳ ಪಟ್ಟಿ ಕೇಳಿದ ಸಚಿವರು

Spread the love

ಬೆಂಗಳೂರು, ಜುಲೈ 14: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳ ಪಟ್ಟಿ ತಯಾರಾಗುತ್ತಿದೆ. ಸ್ವತಃ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ.

ಕಂದಾಯ ಸಚಿವರ ಸೂಚನೆ ಮೇರೆಗೆ ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಪತ್ರವನ್ನು ಬರೆದಿದ್ದಾರೆ.

ಸಚಿವರು ಈ ಪತ್ರವನ್ನು ಟ್ವೀಟ್ ಮಾಡಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ತಮ್ಮ ಟ್ವೀಟ್‌ನಲ್ಲಿ, ‘ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಕಂದಾಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ. ಒಂದೇ ಸ್ಥಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿದೆ’ ಎಂದು ಹೇಳಿದ್ದಾರೆ.

ಪತ್ರದಲ್ಲಿ ಏನಿದೆ?; ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಬರೆದಿರುವ ಪತ್ರದಲ್ಲಿ ದಿನಾಂಕ 8/7/2024ರಂದು ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು/ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆ ನಡೆಸಲಾಯಿತು.

ಸದರಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಜನರ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಸಕಾರಾತ್ಮಕವಾಗಿ ಮತ್ತು ಗುಣಾತ್ಮಕವಾಗಿ ಇತ್ಯರ್ಥಪಡಿಸಲು ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಯಾಗುವಂತೆ ಸಮನ್ವಯತೆ ಸಾಧಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಅಧೀನ ಅಧಿಕಾರಿ/ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

ಅಲ್ಲದೆ ಕಛೇರಿಯಲ್ಲಿ ಉತ್ತಮ ಕಾರ್ಯಕ್ಷಮತೆ, ಶಿಸ್ತು ಪಾಲಿಸುವಂತೆ ಕ್ರಮ ವಹಿಸಲು ಮತ್ತು ಒಂದು ವೇಳೆ ಈ ದಿಸೆಯಲ್ಲಿ ನಿರ್ಲಕ್ಷತೆ ತೋರಿದ ಅಧಿಕಾರಿ/ ಸಿಬ್ಬಂದಿಗಳ ಮೇಲೆ ನಿಯಮಾನುಸಾರ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಅಧಿಕಾರಿ/ ನೌಕರರ ಬಗ್ಗೆ ಅಸಮರ್ಥತೆ ಅಥವಾ ದೂರುಗಳು ಇತ್ಯಾದಿಗಳ ಕಾರಣದಿಂದ ಅವರನ್ನು ವರ್ಗಾವಣೆ ಮಾಡಲು ಅಥವಾ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು ಕಳುಹಿಸುವಂತೆ ಸೂಚಿಸಿದೆ.

ಹಲವು ಅಧಿಕಾರಿಗಳು ಮತ್ತು ನೌಕರರು ಒಂದೇ ಕಚೇರಿ ಅಥವಾ ಒಂದೇ ಸ್ಥಳದಲ್ಲಿ ಅವಧಿ ಮೀರಿ ಕೆಲಸ ಮಾಡುತ್ತಿರುವುದು, ಅಲ್ಲದೆ. ಇಂತಹ ಹಲವು ಅಧಿಕಾರಿಗಳು/ ನೌಕರರುಗಳ ವಿರುದ್ಧ ದೂರುಗಳು ಸಹ ಸ್ವೀಕೃತವಾಗಿರುವುದು ಸರ್ಕಾರದ ಗಮನಕ್ಕೂ ಬಂದಿದೆ ಎಂದು ಉಲ್ಲೇಖ ಮಾಡಲಾಗಿದೆ.

ಆದ್ದರಿಂದ ಒಂದೇ ಹುದ್ದೆ/ ಸ್ಥಾನದಲ್ಲಿ ಅಥವಾ ಒಂದೇ ಸ್ಥಳದಲ್ಲಿ 5 ವರ್ಷ ಮೀರಿ ಮುಂದುವರಿದಿದ್ದಲ್ಲಿ ಮತ್ತು ಅಂತಹವರ ವಿರುದ್ಧ ದೂರುಗಳೇನಾದರೂ ಇದ್ದಲ್ಲಿ, ಅವರ ಅಧಿಕಾರಾವಧಿಯ ವಿವರಗಳೊಂದಿಗೆ ವಿವರವಾದ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಲು ಸೂಚಿಸಿದೆ. ಇದನ್ನು ಆದ್ಯತೆಯ ಮೇರೆಗೆ ಎಂದು ಪರಿಗಣಿಸುವಂತೆ ಕೋರಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ