Breaking News

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

Spread the love

ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

ಮಲ್ಲರೆಡ್ಡಿ ಸಸ್ಪೆಂಡ್ ಆಗಿರುವ ಗ್ರಾಮ ಪಂಚಾಯತ್ ಪಿಡಿಒ. ಗ್ರಾಮದ ಮೂರು ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದಾಗ್ಯೂ ಪಿಡಿಒ ಮಲ್ಲರೆಡ್ಡಿ ಅದೇ ನೀರನ್ನು ಕುಡಿಯಲು ಪೂರೈಕೆ ಮಾಡಿದ್ದಾರೆ ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಓ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ