Breaking News

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

Spread the love

ತೀರ್ಥಹಳ್ಳಿ : ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ಓಡಾಟ ನಡೆಸುವ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.

ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್ ಘಾಟಿ ಮಾರ್ಗವಾಗಿ ಹೋಗುತ್ತಿವೆ.BREAKING : ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಭಾರಿ ವಾಹನಗಳ ಸಂಚಾರ ನಿಷೇಧ

ಈಗ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ. ಕಳೆದ ಮೂರು ವರ್ಷಗಳ ಹಿಂದೆ ಕೂಡ ಆರನೇ ಸುತ್ತಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ ಈಗಾಗಲೇ ಕುಸಿದಿದ್ದು ಇನ್ನಷ್ಟು ಘಾಟಿ ಕುಸಿಯುವ ಸಾಧ್ಯತೆ ಇದೆ.

ಘಾಟಿ ಕುಸಿದ ಪರಿಣಾಮ ರಸ್ತೆಯ ಮೇಲೆ ಕಲ್ಲುಗಳು ಬಿದ್ದಿದ್ದು ಘಾಟಿಯಲ್ಲಿ ಗುಡ್ಡ ಕುಸಿದ ಹಿನ್ನೆಲೆ ತೆರವು ಕಾರ್ಯಚರಣೆ ಆರಂಭವಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ