Breaking News

ಡಿಸಿಎಂ ಡಿಕೆಶಿಗೆ “ಸುಪ್ರೀಂ” ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ

Spread the love

ಬೆಂಗಳೂರು,ಜು.15-ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ.

ಡಿಸಿಎಂ ಡಿಕೆಶಿಗೆ "ಸುಪ್ರೀಂ" ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕ್ಷಮಿಸಿ ನಿಮ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮೂರು ತಿಂಗಳೊಳಗೆ ಶಿವಕುಮಾರ್ ಮೇಲಿನ ಆರೋಪದ ಕುರಿತು ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

ಈ ವೇಳೆ ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಕಾಯ್ದೆಯಡಿ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಸಿಬಿಐ ಕೂಡ ಅದರ ವಿಚಾರಣೆ ನಡೆಸುವುದು ಹೇಗೆ? ಇದು ಅಕ್ರಮ ಎಂದು ವಾದ ಮಂಡಿಸಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ