Breaking News

ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಸಿಬ್ಬಂದಿ

Spread the love

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಕಚೇರಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (45) ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ. ನಿನ್ನೆ ಬೆಳಿಗ್ಗೆ ಸೆಕ್ಯೂರಿಟಿ ಗಾರ್ಡ್ ಬಳಿ ರೆಕಾರ್ಡ್ ರೂಮ್ ಬೀಗ ಕೇಳಿ ಪಡೆದಿದ್ದ ಮಹೇಶ್, ನಿನ್ನೆ ಬೆಳಿಗ್ಗೆಯಿಂದಲೂ ರೆಕಾರ್ಡ್ ರೂಮ್ ನಲ್ಲಿಯೇ ಓಡಾಡುತ್ತಿದ್ದರು.BREAKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಸಿಬ್ಬಂದಿ

ನಿನ್ನೆ ಸಂಜೆ ಯಾರೂ ಇಲ್ಲದ ವೇಳೆ ಕಚೇರಿಯಲ್ಲಿ ನೇಣಿಗೆ ಕೊರಳೊಡ್ಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ