ಬೆಂಗಳೂರು, ಜುಲೈ 16: ಕರ್ನಾಟಕ ಸರ್ಕಾರ ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ. ಪೊಲೀಸರ ವರ್ಗಾವಣೆಗೆ ಅನುಮತಿ ನೀಡಿದೆ. ವರ್ಗಾವಣೆಗೆ ನಿಯಮಗಳೇನು? ಎಂದು ಸಹ ವಿವರಣೆ ನೀಡಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹಸರಿನಲ್ಲಿ, ಜಿ.
ಶ್ಯಾಮ ಹೊಳ್ಳ ಸರ್ಕಾರದ ಅಧೀನ ಕಾರ್ಯದರ್ಶಿ, ಒಳಾಡಳಿತ ಇಲಾಖೆ (ಪೊಲೀಸ್ ಸೇವಗಳು-ಬಿ) ಆದೇಶ ಹೊರಡಿಸಿದ್ದಾರೆ. ಆದೇಶ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಅಧಿಕಾರಿ/ ನೌಕರರ ವರ್ಗಾವಣೆ ಕುರಿತು ಆದೇಶ ಎಂಬ ವಿಷಯ ಒಳಗೊಂಡಿದೆ. ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ವರ್ಗಾವಣೆ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.