Breaking News

ರಾಜ್ಯದಲ್ಲಿ ಇಂದು ಭಾರೀ ಮಳೆ

Spread the love

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.17 ಮತ್ತು 18ರಂದು ಹಾಗೂ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆ ರೆಡ್ ಅಲರ್ಟ್ ನೀಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ