Breaking News

ಸಿಎಂ ರಾಜೀನಾಮೆ ನೀಡಲಿ: ಅಶೋಕ್‌

Spread the love

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರಕಾರಕ್ಕೆ ತಟ್ಟಬಾರದೆಂದರೆ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವ ಜತೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

ವಾಲ್ಮೀಕಿ ಹಗರಣದ ಬಗ್ಗೆ ನಿಯಮ 69ರ ಅಡಿ ಚರ್ಚೆ ಪ್ರಾರಂಭಿಸಿ ಸತತ 3 ಗಂಟೆ ಕಾಲ ಮಾತನಾಡಿ, ಈ ಪ್ರಕರಣದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

ಹಗರಣವಾ ಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೂಬ್ಬರ ಮೇಲೆ ತಪ್ಪು ಹೊರಿಸಿದ್ದಾರೆ. ಇದು ಹೊಣೆ ಇಲ್ಲದ ಸರಕಾರ ಎಂದರು.

Legislative Assembly; ಸಿಎಂ ರಾಜೀನಾಮೆ ನೀಡಲಿ: ಅಶೋಕ್‌

ಎರಡು ಖಾತೆ ತೆರೆಯಬಾರದು ಎಂದು ಸರಕಾರವೇ ಮಾಡಿದ ಆದೇಶವನ್ನು ಉಲ್ಲಂ ಸಲಾಗಿದೆ. ಕಳ್ಳತನ ಆಗಿರುವುದು 187 ಕೋಟಿ ರೂ. ಹೀಗಿರುವಾಗ ಸಿಎಂ ಅದನ್ನು 89 ಕೋಟಿ ರೂ. ಎನ್ನಲು ಸಾಧ್ಯವಿಲ್ಲ. ಇದಕ್ಕಾ
ಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯ
ವರು ತಮಗೆ ಗೊತ್ತಿರಲಿಲ್ಲ ಎಂದರೂ ಅದು ದೊಡ್ಡ ತಪ್ಪು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳವನ್ನು ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ. ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೂ ವಿಶೇಷ ತನಿಖಾ ದಳ ರಚಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. ಸಿಬಿಐ ತನಿಖೆಯಾದರೆ 2 ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫ‌ಲವಾಗಿದೆ ಎಂದರು.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ