Breaking News

ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದೀರಿ. ಶುಭ್ರತೆಯ ಪೋಸ್‌ ಬಿಟ್ಟುಬಿಡಿ..

Spread the love

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಂಟಿದ ಕಳಂಕವಷ್ಟೇ ಅಲ್ಲ, ಅವರ ಇಡಿ ವçಕ್ತಿತ್ವಕ್ಕೆ ಮೆತ್ತಿಕೊಂಡ ಕೆಸರು. ರಾಜ್ಯದ ಜನತೆಯ ಮುಂದೆ ಶುಭ್ರತೆಯ ಪೋಸು ನೀಡುತ್ತಿದ್ದ ಸಿದ್ದರಾಮಯ್ಯ ಈ ಬಾರಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ.

ರಾಜೀನಾಮೆ ಕೊಟ್ಟರೂ ಈ ಕಳಂಕಿತ ಚಾರಿತ್ರ್ಯದಿಂದ ಅವರಿಗೆ ಮುಕ್ತಿ ಸಿಗುವುದಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಅಭಿಪ್ರಾಯಪಟ್ಟಿದ್ದಾರೆ.

“ಉದಯವಾಣಿ’ಗೆ ನೀಡಿದ ನೇರಾನೇರ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಹತ್ತು-ಹದಿನೈದು ವರ್ಷದಿಂದ ಹಂತಹಂತವಾಗಿ ಹೊಂಚು ಹಾಕಿ ಸಿದ್ದರಾಮಯ್ಯ ಈ ಭೂಮಿ ಹೊಡೆದುಕೊಂಡಿದ್ದಾರೆ. ಈ ಕಲಿಯುಗದಲ್ಲಿ ಯಾರಾದರೂ ಅರಿಸಿನ-ಕುಂಕುಮಕ್ಕೆ ಮೂರು ಎಕ್ರೆ ದಾನ ಕೊಡುತ್ತಾರೆ ಎಂದರೆ ನಂಬಲು ಸಾಧ್ಯವೇನ್ರೀ ? ಸಿದ್ದರಾಮಯ್ಯನವರೇ ನಿಮ್ಮ ರಾಜಕಾರಣದ ಸಂಧ್ಯಾ ಕಾಲದಲ್ಲಿ ಕಳಂಕ ಅಂಟಿದೆ. ರಾಜ್ಯದ ಜನತೆಯ ದಾರಿ ತಪ್ಪಿಸದೇ ಖುರ್ಚಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಧಾರವಾಡದಲ್ಲಿ 54 ಜೂಜಾಟದ ಪ್ರಕರಣಗಳು ದಾಖಲು

Spread the love ಧಾರವಾಡ: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್​​ 20 ರಿಂದ 23ರವರೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ